ಕೂಗು ನಿಮ್ಮದು ಧ್ವನಿ ನಮ್ಮದು

ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಆತ್ಮರಕ್ಷಣೆಗಾಗಿ ಪೊಲೀಸರಿಂದ ಪೈರಿಂಗ್

ಕಲಬುರಗಿ: ಕಲಬುರಗಿ ನಗರದಲ್ಲಿ ಬೆಳ್ಳೆಂಬೆಳಗೆ ಪೊಲೀಸರ ಗುಂಡಿನ ಸದ್ದು ಕೇಳಿಬಂದಿದೆ. ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರಿಂದ ಪೈರಿಂಗ್ ನಡೆದಿದೆ. ಕಲಬುರಗಿ ನಗರದ ಹೊರ ವಲಯದ ಸುಲ್ತಾನಪುರ ಬಳಿ ಈ ಪೈರಿಂಗ್ ನಡೆದಿದ್ದು, ಕಲಬುರಗಿಯ ಮೆಹಬೂಬ್ ನಗರದ ನಿವಾಸಿ ಮುಬೀನ್ (22) ಮೇಲೆ ಪೈರಿಂಗ್ ಮಾಡಲಾಗಿದೆ.

ಪೊಲೀಸರ ಗುಂಡಿನ ದಾಳಿಗೆ ಒಳಗಾದ ಆರೋಪಿ ಮುಬಿನ್

ಕಲಬುರಗಿ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಸೋಮಲಿಂಗ್ ಕಿರದಳ್ಳಿ ಅವರ ಬಂದೂಕು ಸದ್ದು ಮಾಡಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಮುಂದಾಗಿದ್ದ ಮುಬೀನ್ ಮೇಲೆ ಆತ್ಮರಕ್ಷಣೆಗಾಗಿ ಸಿಪಿಐ ಸೋಮಲಿಂಗ್ ಕಿರದಳ್ಳಿ ಮುಬೀನ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುಬೀನ್ ಪೊಲೀಸರ ಕಣ್ತಪ್ಪಿಸಿ ತಿರುಗಾಡುತ್ತಿದ್ದ. ಇದೀಗ ಕಳೆದ ರಾತ್ರಿ ಪೊಲೀಸರ ಕೈಗೆ ಸಿಕ್ಕಿದ್ದ ಮುಬೀನ್ ನನ್ನು, ಕೊಲೆ ವೇಳೆ ಬಳಸಿದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಇಂದು ಮುಂಜಾನೆ ಪೊಲೀಸರು ಕರೆದೋಯ್ದಿದ್ದರು.

ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಈ ಫೈರಿಂಗ್ ನಡೆದಿದೆ. ಇನ್ನು ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಗಾಯಾಳು ಮುಬೀನ್ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕಲಬುರಗಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

error: Content is protected !!