ಬೆಳಗಾವಿ: ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಮತ್ತೊಂದೆಡೆ ಸುರೇಶ್ ಅಂಗಡಿ ಅವರ ಮಾವ ಹೊಸ ಬಾಂಬ್ ಸಿಡಿಸಿದ್ದು, ಸುರೇಶ್ ಅಂಗಡಿ ಅವರನ್ನು ಸಿಎಂ ಮಾಡಲು ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆದಿತ್ತು ಎಂದಿದ್ದಾರೆ. ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಬೆಳಗಾವಿ ಅಂಗಡಿ ನಿವಾಸಕ್ಕೆ ಬಿಜೆಪಿ ನಾಯಕರ ದಂಡೆ ಭೇಟಿ ನಿಡಿತು. ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ, ಎಂಎಲ್ಸಿ ಮಹಾಂತೇಶ ಕವಟಗಿಮಠ, ಶಾಸಕರಾದ ಅಭಯ ಪಾಟೀಲ, ಅನಿಲ್ ಬೆನಕೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭೇಟಿ ನೀಡಿ ಅಂಗಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು.
ಇದೇ ವೇಳೆ ಲೋಕಸಭೆ ಟಿಕೆಟ್ ಅಂಗಡಿ ಕುಟುಂಬ ಸದಸ್ಯರಿಗೆ ನೀಡಲು ಮನವಿ ಮಾಡಲಾಯಿತು. ಸುರೇಶ್ ಅಂಗಡಿ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಂದ ನಳೀನಕುಮಾರ ಕಟೀಲಗೆ ಮನವಿ ಮಾಡಿದ್ರು. ಈ ವೇಳೆ ಕುಟುಂಬದ ಸದಸ್ಯರಾದ ಪತ್ನಿ ಮಂಗಲ, ಪುತ್ರಿಯರಾದ ಡಾ.ಸ್ಫೂರ್ತಿ, ಶ್ರದ್ದಾ ಉಪಸ್ಥಿತರಿದ್ದರು. ಇನ್ನು ಯಡಿಯೂರಪ್ಪ ಬದಲಾವಣೆಯ ಕಸರತ್ತು ತೆರೆಮರೆಯಲ್ಲಿ ನಡೆದಿತ್ತಾ ಅನ್ನೊ ಅನುಮಾನ ಶುರುವಾಗಿದೆ. ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಯಾಗಿ ಸುರೇಶ ಅಂಗಡಿ ಅವರ ಹೆಸರು ಕಳಿಬಂದಿತ್ತು. ನಾಲ್ಕು ತಿಂಗಳಿಂದ ರಾಷ್ಟ್ರ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು ಎಂದು ಸುರೇಶ್ ಅಂಗಡಿ ಅವರ ಮಾವ ಲಿಂಗರಾಜ್ ಪಾಟೀಲ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಸುರೇಶ್ ಅಂಗಡಿ ಅವರ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ ಬಳಿಕ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದ ಅವರು, ಮುಂದಿನ ಮುಖ್ಯಮಂತ್ರಿ ಸುರೇಶ್ ಅಂಗಡಿಯವರನ್ನೇ ಮಾಡಬೇಕೆಂಬ ಚರ್ಚೆ ಬಲವಾಗಿ ಕೇಳಿ ಬರುತ್ತಿತ್ತು. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು, ಸಭೆಗಳು ನಡೆದಿವೆ. ಯಡಿಯೂರಪ್ಪ ನಂತರ ಲಿಂಗಾಯತ ಪ್ರಬಲ ನಾಯಕ ಅಂಗಡಿ ಆಗಿದ್ದರು. ಜೊತೆಗೆ ಶುದ್ಧ ಪ್ರಾಮಾಣಿಕ ಹಸ್ತದ ಅಂಗಡಿಯವರನ್ನು ಮುಖ್ಯಮಂತ್ರಿ ಮಾಡಿದರೆ ಒಳಿತು ಎಂಬ ಮಾತುಗಳು ಚರ್ಚೆಯಲ್ಲಿ ಇದ್ದವು. ಆದರೆ ವಿಧಿ ಕೈ ಹಿಡಿಯಲಿಲ್ಲ ಎಂದು ಲಿಂಗರಾಜ ಪಾಟೀಲ್ ಹೇಳಿದ್ದಾರೆ.