ಬೆಳಗಾವಿ: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ನಿವಾಸಕ್ಕೆ ರಾಜ್ಯಪಾಲ ವಾಜುಭಾಯ್ ವಾಲಾ ಭೇಟಿ ನೀಡಿದ್ರು. ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ರಾಜ್ಯಪಾಲ ವಜುಭಾಯಿ ವಾಲಾ ಈ ವೇಳೆ ಸಂತಾಪವನ್ನು ವ್ಯಕ್ತಪಡಿಸಿದ್ರು. ರಾಜ್ಯಪಾಲರಿಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ಸಾಥ್ ನೀಡಿದ್ರು. ಈ ವೇಳೆ ದಿವಂಗತ ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಲಾ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತಿ ಇದ್ದರು.