ಗೋಕಾಕ್: ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿಗಳಾದ ಭಾಸ್ಕರರಾವ್ ಎಸ್. ರಾವುತ್ ಅವರು ಸಮರ್ಥ ಅಧಿಕಾರಿಯಾಗಿದ್ದರು. ಅವರ ಅಗಲಿಕೆಯಿಂದ ಶ್ರೇಷ್ಠ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ. ಶೈಕ್ಷಣಿಕ ವಿಷಯಗಳಲ್ಲಿ ತುಂಬಾ ಅನುಭವಿಗಳಾಗಿದ್ದ ರಾವುತ್ ಅವರು ಗೋಕಾಕ್ ಕ್ಷೇತ್ರವನ್ನು ಸುಶಿಕ್ಷಿತ ತಾಲ್ಲೂಕನ್ನಾಗಿಸಲು ತುಂಬಾ ಶ್ರಮಿಸಿದ್ದರು. ಇವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಇವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ರಮೇಶ್ ಜಾರಕಿಹೊಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.