ಕೂಗು ನಿಮ್ಮದು ಧ್ವನಿ ನಮ್ಮದು

ಮಂಗಳೂರು: ಫೋನ್ ಕದ್ದಾಲಿಕೆ ಪ್ರಕರಣ | ಮಾಧ್ಯಮಗಳ ವಿರುದ್ದ ಹೆಚ್ಡಿಕೆ ವಾಗ್ದಾಳಿ

ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಫೊನ್ ಕದ್ದಾಲಿಕೆ ಪ್ರಕರಣದ ವಿಚಾರವಾಗಿ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಬಿಐ ಅಲ್ಲಾ ಟ್ರಂಪ್ ಸಹಾಯ ಪಡೆದು ಅಂತರಾಷ್ಟ್ರೀಯ ಏಜನ್ಸಿಯಲ್ಲೇ ತನಿಖೆ ಮಾಡಲಿ. ಜೆಡಿಎಸ್ ಪಕ್ಷ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ, ಫೋನ್ ಕದ್ದಾಲಿಕೆ ವಿಚಾರದಲ್ಲಿ ಇಲೆಕ್ಟ್ರಾನಿಕ್ ಮೀಡಿಯಾಗಳು ನನ್ನನ್ನು ಎಳೆದು ತರಲು ಯತ್ನಿಸುತ್ತಿವೆ. ನನ್ನ ಮತ್ತು ಜನತೆಯ ನಡುವೆ ಅವಿಶ್ವಾಸ ಮೂಡಿಸಲು ಯತ್ನಿಸುತ್ತಿವೆ. ನಾನು ಯಾವುದೇ ಕಾರಣಕ್ಕೂ ಎಲೆಕ್ಟ್ರಾನಿಕ್ ಮೀಡಿಯಾಗಳ ಒತ್ತಡಕ್ಕೆ ಬಗ್ಗಲ್ಲ. ಮಾಧ್ಯಮಗಳು ಫೋನ್ ಕದ್ದಾಲಿಕೆ ಸ್ಟೋರಿ ಮಾಡಿ ಬಿಲ್ಡಪ್ ತಗಳೋ ಪ್ರಯತ್ನದಲ್ಲಿದೆ ಎಂದು ಮತ್ತೆ ಟಿವಿ ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದಾರೆ.
error: Content is protected !!