ಕೂಗು ನಿಮ್ಮದು ಧ್ವನಿ ನಮ್ಮದು

ಮಹಾರಾಷ್ಟ್ರದಲ್ಲಿ ಕಳ್ಳರ, ದರೋಡೆಕೋರರ ರೀತಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ.

ಹುಬ್ಬಳ್ಳಿ: ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರಿಗೆ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬರಬೇಕು ಎಂಬುದಿಲ್ಲ. ಪ್ರಜಾಪ್ರಭುತ್ವದಲ್ಲಿ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಬೇಕು. ಪ್ರಜಾಪ್ರಭುತ್ವದಲ್ಲಿ ಯಾರಿಗೆ ನಂಬಿಕೆ ಇಲ್ಲವೋ ಅವರು ಇಂತಹ ಕೆಲಸ ಮಾಡುತ್ತಾರೆ ಎಂದ ಸಿದ್ದರಾಮಯ್ಯ, ಮಹಾರಾಷ್ಟ್ರದಲ್ಲಿ ಕಳ್ಳರ ಹಾಗೂ ದರೋಡೆಕೋರರ ರೀತಿ ಅಧಿಕಾರಕ್ಕೆ ಬಂದಿದ್ದಾರೆ. ರಾತ್ರೋರಾತ್ರಿ ಅಧಿಕಾರವನ್ನ ದುರ್ಬಳಕೆ ಮಾಡಿಕೊಂಡು ಈ ರೀತಿ ಮಾಡಿದ್ದಾರೆ. ಅಧಿಕಾರವನ್ನ ದುರ್ಬಳಕೆ ಮಾಡಿಕೊಂಡರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ನಮ್ಮ ಬಳಿಯೂ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ. ನಾವು ಯಾವತ್ತಾದ್ರೂ ಅವರನ್ನ ಕರೆದಿದ್ದೇವಾ ? ಎಂದ ಅವರು ಹೋಗುವವರು ಈಗಾಗಲೇ ಹೋಗಿದ್ದಾರೆ ಮತ್ತೆ ಯಾವ ಶಾಸಕರೂ ಹೋಗಲ್ಲ ಎಂದಿದ್ದಾರೆ. ಇನ್ನು ಅಜೀತ್ ಪವಾರ್ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ ಅದಕ್ಕೆ ಬಿಜೆಪಿಗೆ ಸೇರಿಕೊಂಡಿದ್ದಾರೆ. ತಮ್ಮ ಮೇಲಿರುವ ಪ್ರಕರಣಗಳನ್ನ ವಜಾಗೊಳಿಸಿಕೊಳ್ಳಲಿಕ್ಕೆ ಹೋಗಿದ್ದಾರೆಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
error: Content is protected !!