ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ ಮತ್ತು ಇತ್ತೀಚಿಗೆ ರಾಜ್ಯಸಭಾ ಸದಸ್ಯ ರಾಗಿದ್ದ ಶ್ರೀ ಅಶೋಕ್ ಗಸ್ತಿ ಯವರ ಅಕಾಲಿಕ ನಿಧನವು ನನ್ನ ಮನಸ್ಸಿಗೆ ಅತೀವ ದುಃಖವನ್ನು ತಂದಿದೆ. ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಾ ಕೆಳಹಂತದಿಂದ ನಾಯಕರಾಗಿ ಬೆಳೆದಿದ್ದ ಗಸ್ತಿ ಅವರ ಸಂಘಟನಾ ಚತುರತೆ ಗಮನಿಸಿ, ಅವರನ್ನು ಇತ್ತಿಚಿಗೆ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು.
ರಾಯಚೂರು ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯ ಜವಾಬ್ದಾರಿ ಹೊತ್ತು ಭಾಜಪದ ಕಾರ್ಯ ಕ್ಷೇತ್ರ ವಿಸ್ತರಿಸಿದ್ದ ಗಸ್ತಿ ಯವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು .ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮತ್ತು ಅವರ ಕುಟುಂಬದ ಸದಸ್ಯರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಅಗಲಿಕೆಯ ಶೋಕವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ
ಶ್ರೀ ರಮೇಶ್ ಜಾರಕಿಹೊಳಿ
ಜಲಸಂಪನ್ಮೂಲ ಸಚಿವರು.