ಬೆಳಗಾವಿ: ಬೆಳಗಾವಿ ಸಂಸದ, ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿಗೆ ಕೊರೊನಾ ಪಾಸಿಟಿವ್ ಇರೋದು ದೃಢಪಟ್ಟಿದೆ.
ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಖುದ್ದು ಟ್ವಿಟ್ ಮಾಡಿದ ಸಚಿವ ಸುರೇಶ್ ಅಂಗಡಿ, ನನಗೆ ಯಾವುದೇ ರೋಗದ ಲಕ್ಷಣಗಳು ಇರುವುದಿಲ್ಲ. ಆದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಸಚಿವ ಸುರೇಶ್ ಅಂಗಡಿ ಮನವಿ ಮಾಡಿಕೊಂಡಿದ್ದಾರೆ.