ಕೂಗು ನಿಮ್ಮದು ಧ್ವನಿ ನಮ್ಮದು

ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಶೀಘ್ರ ಇತ್ಯರ್ಥಗೊಳಿಸದಿದ್ದರೆ ರಾಜ್ಯವ್ಯಾಪಿ ಹೋರಾಟ: ದೀಪಕ್ ಗುಡುಗನಟ್ಟಿ

ಬೆಳಗಾವಿ: ಬೆಳಗಾವಿಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆ ಹರಿಸಲು ಜಿಲ್ಲಾಧಿಕಾರಿಗಳು ಮದ್ಯಸ್ಥಿಕೆ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕರವೇ ಪದಾಧಿಕಾರಿಗಳು, ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪೀರನವಾಡಿಯ ಮುಖ್ಯ ಸರ್ಕಲ್ ನಲ್ಲಿ ಪ್ರತಿಷ್ಠಾಪನೆ

ದೀಪಕ್ ಗುಡುಗನಟ್ಟಿ. ಕರವೇ ಜಿಲ್ಲಾಧ್ಯಕ್ಷ

ಮಾಡುವ ಕುರಿತು ರಾಯಣ್ಣನ ಅಭಿಮಾನಿಗಳು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದಾರೆ. ಈ ವಿಚಾರವಾಗಿ ರಾಜ್ಯಾದ್ಯಂತ ಕೂಗು ಕೇಳಿಬರುತ್ತಿದ್ದು, ಜಿಲ್ಲಾಧಿಕಾರಿಗಳಾದ ತಾವು ಈ ವಿಷಯದಲ್ಲಿ ಕೂಡಲೇ ಮದ್ಯಸ್ಥಿತಿಕೆ ವಹಿಸಬೇಕು. ಈ ಸಮಸ್ಯೆಯನ್ನು ತ್ವರಿತಗತಿಯಲ್ಲಿ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರಲ್ಲದೆ, ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯವ್ಯಾಪಿ ಹೋರಾಟ ಮಾಡುವದು ಅನಿವಾರ್ಯವಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.

error: Content is protected !!