ಕೂಗು ನಿಮ್ಮದು ಧ್ವನಿ ನಮ್ಮದು

ಸವದತ್ತಿಯಲ್ಲಿ ಭೀಕರ ರಸ್ತೆ ಅಪಘಾತ: ಟಾಟಾ ಏಸ್-ಬುಲೆರೊ ಮುಖಾಮುಖಿ ಡಿಕ್ಕಿ 6 ಜನ ಕಾರ್ಮಿಕರು ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ಮತ್ತು ಬುಲೆರೋ ವಾಹದನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲಿಯೇ 6 ಜನ ಕಾರ್ಮಿಕರ ಸಾವನ್ನಪ್ಪಿದ್ದಾರೆ. ಸವದತ್ತಿ- ಧಾರವಾಡ ರಸ್ತೆಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಗಾಯಾಳುಗಳನ್ನು ಸವದತ್ತಿ ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

error: Content is protected !!