ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ನಗರದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ವಿಜಯಪುರ: ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದು ಹಣವನ್ನು ಜಪ್ತಿ ಮಾಡಿದ್ದಾರೆ.
ಸಿಪಿಐ ಸುನೀಲ್ ಕುಮಾರ್ ನೇತೃತ್ವದಲ್ಲಿ ಸಿಇಎನ್ ಪೊಲೀಸರಿಂದ ಈ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಹೈದ್ರಾಬಾದ್ದಿಂದ ಹುಬ್ಬಳ್ಳಿಗೆ ಟೋಯೊಟಾ ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಹಣ ಜಪ್ತಿ ಮಾಡಲಾಗಿದೆ.
ಬಾಲಾಜಿ ನಿಕ್ಕಂ, ಸಚಿನ ಮೋಯಿತೆ ಎಂಬ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು, ಬಂಧಿತರಿಂದ ನಗದು, ಟೋಯೋಟಾ ಕಾರು, ಎರಡು ಮೊಬೈಲ್ ಜಪ್ತಿ ಮಾಡಲಾಗಿದ್ದು, ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.