ತುಮಕೂರು: ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗಿಡಾಗಿದ್ದಾನೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಹೊಣಗೆರೆ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಇನ್ನು ಬೈಕ್ ನಲ್ಲಿ ಮೂವರು ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಟಿಪ್ಪರ್ ಲಾರಿಗೆ ಡಿಕ್ಕಿ ಯಾಗಿ ಅಪಘಾತ ಸಂಭವಿಸಿದೆ.
ರಂಗಸ್ವಾಮಿ (40) ಮೃತ ದುರ್ದೈವಿಯಾಗಿದ್ದು, ಬೈಕ್ ಮೇಲಿದ್ದ ಮತ್ತಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ತುರುವೇಕೆರೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.