ಚಿತ್ರದುರ್ಗ: ಕಾರು ಮತ್ತು ಲಾರಿ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ಕು ಜನರ ಸಾವನ್ನಪ್ಪಿದ್ದರೇ,
ಮೂವರಿಗೆ ಗಂಭೀರ ಗಾಯಗಳಾಗಿವೆ.
ಚಿತ್ರದುರ್ಗ ನಗರದ ಹೊರವಲಯದ ಮಲ್ಲಾಪುರ ಗ್ರಾಮದ ಬಳಿ ಈ ಭೀಕರ ಅಪಘಾತ ನಡೆದಿದ್ದು, ಗಾಯಾಳುಗಳನ್ನು ಚಿತ್ರದುರ್ಗದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರನ್ನು ಮಲ್ಲಿಕ್, ಕಲೀಲ್, ತಬ್ರೀಜ್ ಮತ್ತು ಶಮಶುದ್ದೀನ್ ಎಂದು ಗುರುತಿಸಲಾಗಿದೆ. ನರ್ಗೀಸ್, ರೆಹಾನ್ ಮತ್ತು ರಹಾನ್ ಗಾಯಗೊಂಡಿದ್ದು ಚಿತ್ರದುರ್ಗ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಕಾರಿನಲ್ಲಿ ಒಟ್ಟು 7 ಜನರು ಪ್ರಯಾಣಿಸುತಿದ್ದು, ಮೃತರು ಹೊಸಪೇಟೆಯಿಂದ ತುಮಕೂರಿಗೆ ತೆರಳುತಿದ್ದರು ಎನ್ನಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ತಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.