ಕೂಗು ನಿಮ್ಮದು ಧ್ವನಿ ನಮ್ಮದು

ಜವರಾಯನ ಅಟ್ಟಹಾಸಕ್ಕೆ ಮೂವರ ಬಲಿ: ಕಾರು-ಬಸ್ ನಡುವೆ ಭೀಕರ ರಸ್ತೆ ಅಪಘಾತ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ ಮತ್ತು‌ ಸ್ವಿಫ್ಟ್ ಕಾರು ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿದ್ದು, ಐವರಿಗೆ ಗಾಯಗಳಾಗಿವೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕೆಂಪನಕೊಪ್ಪಲು ಗೇಟ್ ಬಳಿ ಈ ದುರ್ಘಟನೆ ಘಟನೆ ನಡೆದಿದೆ. ಬೆಳ್ಳೂರು ಕಡೆಗೆ ತೆರಳುತ್ತಿದ್ದ ಬಸ್ ಮೈಸೂರು ಕಡೆಗೆ ಹೊಗುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.

ಕೊಡಗಿನ ಸೋಮವಾರಪೇಟೆ ಮೂಲದ ಸುದೀಪ್(35), ಶ್ರೀಜಾ( 30) ಹಾಗೂ ತಂಗಮ್ಮ (55) ಮೃತ ದುರ್ದೈವಿಗಳಾಗಿದ್ದಾರೆ. ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದು, 15 ವರ್ಷದ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ಆದಿಚುಂಚನಗಿರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕ ಹಾಗೂ ಬಸ್ ನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮೃತರು ಆದಿಚುಂಚನಗಿರಿಗೆ ಹೋಗಿದ್ದು ಮೈಸೂರಿಗೆ ಹಿಂತಿರುಗುವಾಗ ಜವರಾಯ ತನ್ನ ಅಟ್ಟಹಾಸ ಮೇರೆದಿದ್ದು, ಈ ದುರ್ಘಟನೆ ನಡೆದಿದೆ.

error: Content is protected !!