ಕೂಗು ನಿಮ್ಮದು ಧ್ವನಿ ನಮ್ಮದು

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗ: ಖಾಸಗಿ ಬಸ್ ಬೈಕ್ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ತಂದೆ, ತಾಯಿ ಹಾಗೂ ಇಬ್ಬರು ಮಕ್ಕಳು ಎಂದು ಗುರುತಿಸಿದ್ದು, ಹೆಸರುಗಳು ಪತ್ತೆಯಾಗಿಲ್ಲ.‌ ಇವರೆಲ್ಲರೂ ಬಿ. ದುರ್ಗಾ ನಿವಾಸಿಗಳಾಗಿದ್ದು, ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ವಾಪಸ್ಸು ಬರುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಹೊಳಲ್ಕೆರೆ ಪೋಲಿಸರು ಭೇಟಿ‌ ನೀಡಿ ಪರಿಶೀಲಿಸಿದ್ದಾರೆ.

error: Content is protected !!