ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ವೀರಾಪುರದಿಂದ ಮದುವೆ ಕಾರ್ಯಕ್ರಮಕ್ಕೆ ಟಾಟಾ ಸುಮೋ ಅಹನದಲ್ಲಿ ತೆರಳಿದ ವೀರಾಪೂರ ಗ್ರಾಮದ ಕುಟಂಬ ಮರಳಿ ಊರಿನ ಕಡೆ ಬರುವಾಗ ಬಸ್ ಗೆ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ, ಘಟನೆಯಲ್ಲಿ ಮಾನಸ (10) ಮತ್ತು ಮುನಿಯಪ್ಪ (30) ಮೃತರು. ಚಿಕ್ಕಬಳ್ಳಾಪುರ ಮಾರ್ಗದ ಲಕ್ಕಹಳ್ಳಿ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಇನ್ನು ಈ ಘಟನೆಯಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಬಿ ಪಿ ಮಂಜು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.