ಭೋಪಾಲ್: ಬಸ್ ಮತ್ತು ಕಂಟೇನರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಎಳು ಜನ ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ೧೪ ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಇವತ್ತು ಬೆಳಗ್ಗೆ ೭ ಗಂಟೆ ಸುಮಾರಿಗೆ ಭೀಂಡ್ ಜಿಲ್ಲೆಯ ಹಳ್ಳಿ ಸಮೀಪ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಇದೀಗ ಅವರನ್ನು ೭೯ಕಿಲೋ ಮೀಟರ್ ದೂರದಲ್ಲಿರುವ ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಬರೇಲಿಯ ಮೂಲಕ ಗ್ವಾಲಿಯರ್ಗೆ ಪ್ರಯಾಣಿಕರು ಪ್ರಯಾಣಿಸುತ್ತಿದ್ರು. ಇದೀಗ ನಾವು ಚಾಲಕನನ್ನು ಬಂಧಿಸಿದ್ದು, ಘಟನೆ ಸಂಭದಪಟ್ಟಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮನೋಜ್ ಸಿಂಗ್ ಹೇಳಿದ್ದಾರೆ.