ಲಕ್ನೋ: ಟ್ರಕ್ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ೧೩ ಜನ ಮೃತಪಟ್ಟಿದ್ದು, ೩೦ ಜನ ಗಾಯಗೊಂಡಿರುವ ಘಟನೆಯು ಗುರುವಾರ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಇದೀಗ ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆಯನ್ನು ನಡೆಸಿದ್ದಾರೆ.
೨ ವಾಹನಗಳು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದವು. ಈ ವೇಳೆ ರಸ್ತೆ ಮಧ್ಯೆ ಹಸು ಇತ್ತು, ಹಸುವನ್ನು ರಕ್ಷಿಸಲು ಹೋಗಿ ೨ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಈ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ ಜೊತೆಗೆ ಸಂತ್ರಸ್ಥರಿಗೆ ಅಗತ್ಯವಾದ ಸಹಾಯ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇನ್ನೂ ಮೃತ ಕುಟುಂಬಸ್ಥರಿಗೆ ತಲಾ ೨ ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ ೫೦ ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.