ಕೂಗು ನಿಮ್ಮದು ಧ್ವನಿ ನಮ್ಮದು

ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ ಭೀಕರ ಅಪಘಾತದಲ್ಲಿ ಇಬ್ಬರು ಸಾವು.

ಕಲಬುರಗಿ: ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸಕ್ಕೆ ಇಬ್ಬರು ಬಲಿಯಾಗಿದ್ದಾರೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣಕ್ಕಿಡಾಗಿದ್ದಾರೆ.

ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ಭಂಕೂರು ಬಳಿ ಈ ಘಟನೆ ನಡೆದಿದ್ದು, ಮೃತರನ್ನ ಜಾಹೀದ್ ಪಠಾಣ್ & ಶಾಕೀರ್ ಅಂತ ಗುರುತಿಸಲಾಗಿದೆ. ಮೃತರು ಉತ್ತರಪ್ರದೇಶ ಮೂಲದ ಬಟ್ಟೆ ವ್ಯಾಪಾರಿಗಳಾಗಿದ್ದು ರಂಜಾನ್ ಹಿನ್ನಲೆ ಬಟ್ಟೆ ಖರೀದಿಸಿ ಕಲಬುರಗಿಯಿಂದ ಯಾದಗಿರಿಗೆ ಹೊರಟಾಗ ಈ  ಅವಘಡ ಸಂಭವಿಸಿದೆ.

ಶಹಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಕಾರು,  ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಉಳಿದಂತೆ ಓರ್ವನ ಸ್ತಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!