ಕೂಗು ನಿಮ್ಮದು ಧ್ವನಿ ನಮ್ಮದು

ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಬಾಲೇನಹಳ್ಳಿ ಸಮೀಪದ ರಾ.ಹೆ 151ಎ ರಲ್ಲಿ ಈ ಘಟನೆ ನಡೆದಿದೆ. ಮೃತರೆಲ್ಲರೂ ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದವರಾಗಿದ್ದು, ಕಾರು ಚಾಲಕ ಪ್ರಭಾಕರ್ (38), ವೇಣು (20) ಹಾಗೂ ನಾಗವೇಣಿ (45) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ವಿಶಾಲಾಕ್ಷಮ್ಮ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಳ್ಳಕೆರೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಕಾರು, ಹಿರಿಯೂರು ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇನ್ನು ಘಟನೆ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: Content is protected !!