ಕೂಗು ನಿಮ್ಮದು ಧ್ವನಿ ನಮ್ಮದು

ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳುವುದು ತಪ್ಪು: ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರಕೊಪ್ಪಳ

ಕೊಪ್ಪಳ: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವುದು ತಪ್ಪು ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ, ಕಾಂಗ್ರೆಸ್ನಲ್ಲಿ ನಾವು ಹೇಳಿದಂತೆ ಮುಖ್ಯಮಂತ್ರಿ ಮಾಡಲ್ಲ. ಕಾಂಗ್ರೆಸ್ನಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗುತ್ತೆ. ಹೀಗಾಗಿ ಯಾರೂ ಮುಂದಿನ ಸಿಎಂ ಬಗ್ಗೆ ಮಾತಾಡಬಾರದು. ಶಾಸಕ ಜಮೀರ್ ಅಹ್ಮದ್ಗೂ ಪಕ್ಷ ನಿರ್ದೇಶನ ಕೊಟ್ಟಿದೆ. ಆದರೂ ಅವರು ಪದೇಪದೆ ಅದನ್ನೇ ಹೇಳೋದು ಸರಿಯಲ್ಲ. ಇದರಿಂದ ಕಾಂಗ್ರೆಸ್ಗೆ ಮುಜುಗರವಾಗುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಆದರೆ ಹೈಕಮಾಂಡ್ ತೀರ್ಮಾನ ಮಾಡಬೇಕು. ಈ ಸಂದರ್ಭದಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಸರಿಯಲ್ಲ ಎಂದರು.

error: Content is protected !!