ಕೂಗು ನಿಮ್ಮದು ಧ್ವನಿ ನಮ್ಮದು

ಇವತ್ತು ಕರ್ನಾಟಕಕ್ಕೆ ಅಮಿತ್ ಶಾ: ಇಲ್ಲಿದೆ ಬೀದರ್, ರಾಯಚೂರು, ಬೆಂಗಳೂರು ಪ್ರವಾಸದ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು: ಏಪ್ರಿಲ್ ತಿಂಗಳ ಅಂತ್ಯದಲ್ಲಿ ಅಥವಾ ಮೇ ತಿಂಗಳ ಆರಂಭದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ಸಮಯ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರು ಸಂಚಾರ, ಪ್ರಚಾರ ಜೋರು ಮಾಡಿದ್ದಾರೆ. ಮಾರ್ಚ್ 25ರಂದು ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು. ಇಂದು ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದ ಶಾ ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಬೀದರ್ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗಿ
ಮೊದಲಿಗೆ ಬೀದರ್ನಲ್ಲಿ ಅಮಿತ್ ಶಾ ವಿವಿಧ ಕಾರ್ಯಕ್ರಮದಲ್ಲಿ‌ ಭಾಗಿಯಾಗಲಿದ್ದಾರೆ. ಮುಂಜಾನೆ 10 ಗಂಟೆಗೆ ಬೀದರ್ ಏರ್ ಬೇಸ್ ನಿಂದ ಗೋರಟಾ ಗ್ರಾಮಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಇನ್ನೂರು ಕನ್ನಡಿಗರ ಹತ್ಯೆಯಾದ ಸ್ಥಳದಲ್ಲಿ ಗ್ರಾಮಸ್ಥರ ಜೊತೆಗೆ ಅರ್ಧ ಗಂಟೆ ಸಂವಾದ ನಡೆಸಲಿದ್ದಾರೆ. ನಂತರ ಗೋರಟಾ ಗ್ರಾಮದ ಕೂಗಳೆತೆ ದೂರದಲ್ಲಿರುವ ಹುತಾತ್ಮರ ‌ಸ್ಮಾರಕ 103 ಅಡಿ ಎತ್ತರದ ಧ್ವಜ ಸ್ತಂಭ, ಸರ್ದಾರ್ ವಲ್ಲಭಭಾಯ್ ಪಟೇಲ್ ರ 11 ಅಡಿ ಎತ್ತರದ ಕಂಚಿನ ಪ್ರತಿಮೆ

ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರತಿಮೆ ಲೋಕಾರ್ಪಣೆ ‌ಬಳಿಕ ಕೇಶವ ಕಾರ್ಯ ಸಂವರ್ಧನ ಸಮೀತಿಯವರು ಆಯೋಜಿರುವ ವೇದಿಕೆ ಕಾರ್ಯಕ್ರಮದಲ್ಲಿ‌ ಭಾಗಿಯಾಗಲಿದ್ದಾರೆ. ಬೃಹತ್ ವೇದಿಕೆ ಕಾರ್ಯಕ್ರಮಕ್ಕೆ ಬೀದರ್, ತೆಲಂಗಾಣ, ಮಹಾರಾಷ್ಟ್ರ, ಕಲ್ಬುರ್ಗಿ ‌ಜಿಲ್ಲೆಯಿಂದ ಜನರು ಭಾಗಿಯಾಗಲಿದ್ದಾರೆ. ಅಮಿತ್ ಶಾ ವೇಳಾಪಟ್ಟಿ ಹೀಗಿದೆ
ಬೆಳಗ್ಗೆ 10.30ಕ್ಕೆ ಗೊರಟಾ ಗ್ರಾಮಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಶಾ, ಗೊರಟಾ ಹುತಾತ್ಮ ಸ್ಮಾರಕ, ಪಟೇಲ್ ಸ್ಮಾರಕ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1.45ಕ್ಕೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಶಾ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಬೆಂಗಳೂರಿಗೆ ಆಗಮಿಸಿ ರೇಸ್ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಗುಜರಾತ್ ಸಮಾಜದ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ 6.30ಕ್ಕೆ ವಿಧಾನಸೌಧದ ಮುಂದೆ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ನಂತರ ಬೆಂಗಳೂರು ಹಬ್ಬ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 8.30ಕ್ಕೆ ಖಾಸಗಿ ಹೋಟೆಲ್ನಲ್ಲಿ ರಾಜ್ಯ BJP ಕೋರ್ ಕಮಿಟಿ ಸಭೆ ನಡೆಯಲಿದ್ದು ಇಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಿ ನಾಳೆ ಬೆಳಗ್ಗೆ 9 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.

error: Content is protected !!