ಅಮಿತ್ ಶಾ ಬೆಂಗಳೂರು ಭೇಟಿ, ಚುನಾವಣಾ ತಯಾರಿ ಸಂಬಂಧ ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿಗಳಿಂದ ಸರಣಿ ಸಭೆ ನಡೆಯುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆದಿದ್ದು ಈಗ ಡಿಜಿ & ಐಜಿಪಿ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಯುತ್ತಿದೆ.
ಮಾರ್ಚ್ 3ರಂದು ಬೆಂಗಳೂರಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ಇದೇ ವೇಳೆ ಕಮಿಷನರ್ ಕಚೇರಿಯ ಕಮಾಂಡ್ ಸೆಂಟರ್ಗೆ ಭೇಟಿ ನೀಡಲಿದ್ದಾರೆ. ಬಳಿಕ ಸೇಫ್ ಸಿಟಿ ಪ್ರಾಜೆಕ್ಟ್ಗೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ.