ಬೆಳಗಾವಿ: ಡೆಪ್ಯುಟಿ ಸ್ಪೀಕರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಚೆನ್ನೈನಿಂದ ಬೆಂಗಳೂರು ಮನಿಪಾಲ ಆಸ್ಪತ್ರೆಗೆ ಆನಂದ ಮಾಮನಿ ಅವರನ್ನು ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಮನಿಪಾಲ್ ಆಸ್ಪತ್ರೆಗೆ ಸ್ವಾಮೀಜಿ, ಶಾಸಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯ ವಿಚಾರಣೆ ಬಳಿಕ ಚಂದ್ರಶೇಖರ ಸ್ವಾಮೀಜಿ ಮಾತನಾಡಿದ್ದು, ಆನಂದ ಮಾಮನಿ ಅವರ ಆರೋಗ್ಯ ಚೆನ್ನಾಗಿದೆ, ಯಾವುದೇ ಆತಂಕ ಇಲ್ಲ. ಆದಷ್ಟು ಬೇಗ ಆನಂದ ಮಾಮನಿ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡೋಣ. ಆನಂದ ಮಾಮನಿ ಆರೋಗ್ಯ ಚೇತರಿಕೆಗೆ ದೇವರಲ್ಲಿ ಪಾರ್ಥನೆ ಮಾಡಿ. ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದರು.
ಕೆಲ ದಿನಗಳ ಹಿಂದೆ ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.