ಕೂಗು ನಿಮ್ಮದು ಧ್ವನಿ ನಮ್ಮದು

ರಾಜೀನಾಮೆ ಸಂದೇಶವನ್ನು ರವಾನಿಸಿದ ಸಚಿವ ಆನಂದ್ ಸಿಂಗ್?

ಬೆಂಗಳೂರು: ಖಾತೆ ವಿಚಾರಕ್ಕೆ ಬೇಸರವಾದ ಸಚಿವ ಆನಂದ್ ಸಿಂಗ್ ರಾಜೀನಾಮೆಯ ಸಂದೇಶವೊಂದನ್ನು ಕಳುಹಿಸಿದ್ದಾರೆ ಎಂಬ ಮಾಹಿತಿಯು ಈಗ ಮಾದ್ಯಮ ಒಂದಕ್ಕೆ ಲಭ್ಯವಾಗಿದೆ. ಇವತ್ತು ಇಲ್ಲ ನಾಳೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಕೋಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ಆನಂದ ಸಿಂಗ್ ತಮ್ಮ ರಾಜೀನಾಮೆಯ ಸಂದೇಶವನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಾಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜೀನಾಮೆ ಸಂದೇಶ ಕಳುಹಿಸುವ ಮೂಲಕ ಆನಂದ್ ಸಿಂಗ್ ಅವರು ಮತ್ತೆ ಸಿಎಂ ಬಸವರಾಜ್ ಬೊಮ್ಮಾಯಿಗೆ ಶಾಕ್ ಕೊಟ್ಟಿದ್ದಾರೆ. ಈ ಸಂದೇಶವನ್ನು ತಮ್ಮ ಆಪ್ತ ಶಾಸಕ ರಾಜೂಗೌಡ ಮೂಲಕ ರವಾನೆ ಮಾಡಿದ್ದಾರೆಂದು ತಿಳಿದು ಬಂದಿದೆ.

೨ ದಿನಗಳ ಹಿಂದೆಯೇ ಬೆಂಗಳೂರಿಗೆ ಬಂದಿರುವ ಆನಂದ ಸಿಂಗ್, ಯಾವ ನಾಯಕರನ್ನೂ ಭೇಟಿ ಮಾಡದೇ ಅಜ್ಞಾತವಾಗಿದ್ರು. ನಿನ್ನೆ ರಾತ್ರಿ ಆಪ್ತನ ಜೊತೆ ಮಾತುಕತೆ ನಡೆಸಿ ಆನಂದ್ ಸಿಂಗ್, ಇವತ್ತು ಮುಂಜಾನೆ ಆಪ್ತನ ಮೂಲಕ ಸಂದೇಶವನ್ನು ರವಾನಿಸಿದ್ದಾರೆ ಸಿಎಂ ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ, ಜೀವಶಾಸ್ತ್ರ ಮತ್ತು ಪರಿಸರ ಖಾತೆಯನ್ನು ನೀಡಲಾಗಿದೆ ಎಂದಿದ್ರು.

ಈ ಖಾತೆಯಿಂದ ಆನಂದ್ ಸಿಂಗ್ ಅಸಮಾಧಾನಗೊಂಡಿದ್ದು, ಈ ಹಿಂದೆಯೂ ರಾಜೀನಾಮೆಯ ಎಚ್ಚರಿಕೆ ನೀಡಿದ್ರು. ಬಿ.ಎಸ್ ಯಡಿಯೂರಪ್ಪ ಸರ್ಕಾರದ ವೇಳೆಯೂ ೨ ದಿನದಲ್ಲಿ ೩ ಖಾತೆ ಬದಲಾಯಿಸಿದ್ರು. ಇದು ಅವಮಾನ ಅಲ್ಲ ಆದ್ರೆ ನಿರಾಸೆ ಮಾಡಿರೋದಕ್ಕೆ ಸಾಕಷ್ಟು ಬೇಸರವಾಗಿದೆ. ಕೇಳಿದ ಖಾತೆ ಕೊಡದೇ ಇದ್ರೆ ಶಾಸಕನಾಗಿ ಉಳಿಯುವುದು ಒಳಿತು ಎನ್ನುವದು ನನ್ನ ನಿಲುವು. ಮತ್ತೊಮ್ಮೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಕೊಡದೆ ಇದ್ರೆ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ವಾರ್ನಿಂಗ್ ಕೊಟ್ಟಿದ್ದರು.

error: Content is protected !!