ಕೂಗು ನಿಮ್ಮದು ಧ್ವನಿ ನಮ್ಮದು

ರೇಖಾ ಕದಿರೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಗುಂಡೇಟು, ಬಂಧನ

ಬೆಂಗಳೂರು: ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಹತ್ಯೆ ಪ್ರಕರಣದಲ್ಲಿ ಅನುಮಾನಿತರನ್ನು ಪಟ್ಟಿ ಮಾಡಲಾಗಿತ್ತು. ಪೀಟರ್, ಸೂರ್ಯ ಎಂಬುವವರ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು ಎಂದು ಮಾಹಿತಿ ನೀಡಿದರು.
ಪೊಲೀಸರು ಬಹಳ ಶ್ರಮವಹಿಸಿ ಆರೋಪಿಗಳನ್ನು ಹುಡುಕಿದ್ದರು. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿತ್ತು. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳಿರುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು ಎಂದು ಕಮಲ್ ಪಂತ್ ತಿಳಿಸಿದರು.

ಅನಿವಾರ್ಯ ಪರಿಸ್ಥಿತಿಯಲ್ಲಿ ಪೊಲೀಸರು ಆರೋಪಿಗಳ ಕಾಲಿಗೆ ಗುಂಡುಹಾರಿಸಬೇಕಾಯಿತು ಎಂದು ಕಮಲ್ ಪಂತ್ ತಿಳಿಸಿದರು. ಆರೋಪಿಗಳು ಬಹಳ ಸಮಯದಿಂದ ರೇಖಾ ಜೊತೆಯಿದ್ದರು. ರೇಖಾ ಕದಿರೇಶ್ ಕೊಲೆಗೆ ಕಾರಣದ ಬಗ್ಗೆ ಇನ್ನೂ ವಿಸ್ತೃತ ತನಿಖೆಯಾಗಬೇಕಿದೆ. ಈ ಪ್ರಕರಣದಲ್ಲಿ ಶಾಮೀಲಾಗಿರುವ ಇನ್ನೂ ಹಲವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಕಮಲ್ ಪಂತ್ ನುಡಿದರು. ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಪೀಟರ್ ಮತ್ತು ಸೂರ್ಯ ಅವರನ್ನು ಲಕ್ಷ್ಮೀ ಆಸ್ಪತ್ರೆಯಿಂದ ಸಂಜಯ್ ಗಾಂಧಿ ಆಸ್ಪತ್ರೆಗೆ ಪೊಲೀಸರು ಶಿಫ್ಟ್ ಮಾಡಿದ್ದಾರೆ ಹಾಡಹಗಲೇ BBMP ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಟನ್ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಸಹಕಾರ ನೀಡಿದ ಹಾಗೂ ಸಂಚು ರೂಪಿಸಿದ್ದ ಕಾರಣ ನಾಲ್ವರು ಅರೆಸ್ಟ್ ಆಗಿದ್ದಾರೆ. ಸದ್ಯ ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ ಎಂದರು.

error: Content is protected !!