ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಪರಿಷತ್ ನಲ್ಲಿ ಇವತ್ತು ಮಾತನಾಡಿದ ಹರಿಪ್ರಸಾದ್, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆಂದು ಆರೋಪ ಮಾಡಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಕೆ.ಎಸ್.ಈಶ್ವರಪ್ಪ ಈ ಕೊಲೆ ಮಾಡಿಸಿದ್ದಾರೆ.
ಈ ಬಗ್ಗೆ CBI ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸರ್ಕಾರವನ್ನು ಹರಿಪ್ರಸಾದ್ ಒತ್ತಾಯಿಸಿದರು. ಶಿವಮೊಗ್ಗದಲ್ಲಿ ನಿನ್ನೆ ಒಂದು ಘಟನೆ ಆಗಿದೆ. ಕೊಲೆ ಆದ ಯುವಕನ ತಾಯಿ, ತನ್ನ ಮಗ 2 ವರ್ಷಗಳಿಂದ ಭಜರಂಗದಳದಲ್ಲಿ ಇಲ್ಲ ಅಂತ ಹೇಳಿದ್ದಾರೆ. ಇತ್ತ ಈಶ್ವರಪ್ಪ ಇದು ಮುಸ್ಲಿಂ ಗೂಂಡಾಗಳಿಂದ ಕೊಲೆ ಆಗಿದೆ ಅಂತಾರೆ. ಗೃಹ ಸಚಿವರು ಇದ್ದಾಗ ಇವರು ಹೇಳಿಕೆ ಕೊಟ್ಟಿದ್ದಾರೆ.
ಹಾಗಾಗಿ ಈ ಕೊಲೆಯನ್ನು ಈಶ್ವರಪ್ಪನೇ ಮಾಡಿಸಿದ್ದಾರೆಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. ಈಶ್ವರಪ್ಪ ಪರೋಕ್ಷವಾಗಿ ಈ ಕೊಲೆ ಮಾಡಿಸಿದ್ದಾರೆ. ಪೊಲೀಸರ ತನಿಖೆ ಮುನ್ನ ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ ಎಂದು ಹೇಳುತ್ತಾ ಪೆರೆಸ್ ಮೆಸ್ತಾ ವಿಷಯವನ್ನು ಹರಿಪ್ರಸಾದ್ ಪ್ರಸ್ತಾಪ ಮಾಡಿದ್ರು. ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೆದಿದ್ದು, ಹರಿಪ್ರಸಾದ್ ವಿರುದ್ಧ BJP ಸದಸ್ಯರು ಆಕ್ರೋಶ ಹೊರ ಹಾಕಿದ್ರು.