ಕೂಗು ನಿಮ್ಮದು ಧ್ವನಿ ನಮ್ಮದು

ಮಹಾರಾಷ್ಟ್ರ ಡ್ಯಾಂನಿಂದ ಕರ್ನಾಟಕಕ್ಕೆ ನೀರು ಬೀಡುವ ವಿಚಾರ: ಸಮನ್ವಯ ಸಾಧಿಸಿ, ನೆರೆ ತಪ್ಪಿಸಲು ಎರಡು ರಾಜ್ಯಗಳೂ ಒಪ್ಪಿಗೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರ ರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ ನಡೆಸಿದರು.
ಸಭೆಯಲ್ಲಿ ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿ ಪ್ರವಾಹ ನಿರ್ವಹಣೆಯ ಕುರಿತು ವಿವಿಧ ವಿಷಯಗಳ ಚರ್ಚೆ ನಡೆಸಿ, ಎರಡೂ ರಾಜ್ಯಗಳ ನಡುವೆ ಸಚಿವರು ಕಾರ್ಯಾದರ್ಶಿಗಳ ಹಂತ ಹಾಗೂ ತಳಹಂತದ ಅಧಿಕಾರಿಗಳ ನಡುವೆ ಉತ್ತಮ ಸಂವಹನ ಸಮನ್ವಯ ನಿರ್ವಹಿಸಲು ತೀರ್ಮಾನ ಮಾಡಿದರು. ಮತ್ತು ಎರಡೂ ರಾಜ್ಯಗಳ ನಡುವೆ ಮಳೆಯ ಪ್ರಮಾಣ ಜಲಾಶಯಗಳಿಂದ ನೀರು ಬಿಡುಗಡೆ ಕುರಿತಂತೆ ಕ್ಷಣ ಕ್ಷಣದ ಮಾಹಿತಿ ಹಂಚಿಕೊಳ್ಳಲು ಚರ್ಚಿಸಿ ತೀರ್ಮಾನ ಮಾಡಿದ್ದಾರೆ. ಹಾಗೂ ದೂಧ್ ಗಂಗಾ ಯೋಜನೆಯನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲು ಮಹಾರಾಷ್ಟ್ರ ಸರಕಾರ ಒಪ್ಪಿಗೆ ನೀಡಿದೆ. ಮತ್ತು ಬೇಸಿಗೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 4 ಟಿಎಂಸಿ ನೀರು ಹಾಗೂ ಮಳೆಗಾಲದಲ್ಲಿ ಮಹಾರಾಷ್ಟ್ರಕ್ಕೆ ರಾಜ್ಯದಿಂದ 4 ಟಿಎಂಸಿ ನೀರು ಒದಗಿಸುವ ಬಗ್ಗೆ
ತಾಂತ್ರಿಕ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಿದರು. ಈ ಸಭೆಯಲ್ಲಿ
ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

error: Content is protected !!