ಬೆಂಗಳೂರು: ನನ್ನ ಸಂಪೂರ್ಣ ಬದುಕನ್ನು ಬಿಜೆಪಿ, ದೇಶಕ್ಕೆ ಮುಡಿಪಿಟ್ಟಿದ್ದೇನೆ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಈ ಚುನಾವಣೆಯಲ್ಲಿ ಹೊಸಮುಖಗಳಿಗೆ ಅವಕಾಶ ಕೊಟ್ಟಿದ್ದೇವೆ. ಎಲ್ಲಾ ಸಮುದಾಯಗಳ ಕೊಂಡೊಯ್ಯುವ ಪ್ರಯತ್ನ ಮಾಡಿದ್ದೇವೆ. ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ.
ಮೀಸಲಾತಿ ಹೆಚ್ಚಿಸಿ ಅನೇಕ ದಶಕಗಳ ಬೇಡಿಕೆ ಈಡೇರಿಸಿದ್ದೇವೆ. ಬಿಜೆಪಿ ಸಾಮಾಜಿಕ ನ್ಯಾಯ ಪಾಲನೆ ಮಾಡಿದೆ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು