ಕೂಗು ನಿಮ್ಮದು ಧ್ವನಿ ನಮ್ಮದು

ಮಾಜಿ ಸಿಎಂ ಬಿಎಸ್‍ವೈ ಆಪ್ತರಿಗೆ ಸರ್ಕಾರದಲ್ಲಿ ಮಣೆ, ರೇಣುಕಾಚಾರ್ಯ, ಜೀವರಾಜ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಮರು ನೇಮಕ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಪ್ತ ಶಾಸಕರಾದ ರೇಣುಕಾಚಾರ್ಯ ಮತ್ತುD.N ಜೀವರಾಜ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಮರು ನೇಮಕಗೊಂಡಿದ್ದಾರೆ. ಬಿಎಸ್ವೈ ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಇಬ್ರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ರು.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಿಎಂ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಎಂದು ಘೋಷಿಸಿದ್ರು. ಬಿ.ಎಸ್ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸಬರಿಗೆ ಅವಕಾಶ ಸಿಗಬೇಕು ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ರು. ಬಿಎಸ್ವೈ ರಾಜೀನಾಮೆ ನಂತರ ಅವರ ಆಪ್ತ ಶಾಸಕರಾದ ರೇಣುಕಾಚಾರ್ಯ ಮತ್ತು ಜೀವರಾಜ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೈ ಬಿಡಲಾಗಿತ್ತು.

ಆದ್ರೆ ಇದೀಗ ಮತ್ತೆ ಸಿಎಂ ಬೊಮ್ಮಾಯಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತು ಶೃಂಗೇರಿ ಶಾಸಕ D.N ಜೀವರಾಜ್ ಅವರನ್ನು ತಮ್ಮ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ವೈನವರ ಆಪ್ತ ಶಾಸಕರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅಧಿಕೃತ ಆದೇಶ ಹೊರಡಿಸಿದೆ.

ತಮ್ಮ ಆಪ್ತ ಶಾಸಕರು ಮತ್ತು ಬೆಂಬಲಿಗರನ್ನು ಯಾವುದೇ ಕಾರಣಕ್ಕೂ ಟಾರ್ಗೆಟ್ ಮಾಡಬಾರದು, ನಿಗಮ ಮಂಡಳಿ ಸೇರಿದಂತೆ ಇನ್ನೂ ಅನೇಕ ಸ್ಥಾನದಲ್ಲಿರುವ ಬೆಂಬಲಿಗರನ್ನು ಮುಂದುವರೆಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಎಸ್ವೈ ಷರತ್ತು ಹಾಕಿದ್ದಾರೆ ಎನ್ನಲಾಗಿದೆ. ಈ ಮೂಲಕ ತಮ್ಮ ವಿರೋಧಿ ಬಣಕ್ಕೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

error: Content is protected !!