ಕೂಗು ನಿಮ್ಮದು ಧ್ವನಿ ನಮ್ಮದು

ರೈತರ ಮೇಲೆ ಲಾಠಿ ಬೀಸಿದ ಪೊಲೀಸರು

ಬಳ್ಳಾರಿ: ಮೆಣಸಿನ ಬೀಜ ಖರೀದಿಗೆ ಬಂದಿದ್ದ ರೈತರ ಮೇಲೆ ಪೊಲೀಸರು ಲಾಠಿ ಬೀಸಿರುವ ಘಟನೆ ಬಳ್ಳಾರಿಯ ರೈತ ಸಂಪರ್ಕ ಕೇಂದ್ರದಲ್ಲಿ ನಡೆದಿದೆ. ಮುಂಗಾರು ಆರಂಭವಾಗುತ್ತಿದಂತೆ ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ರೈತ ಸಂಪರ್ಕ ಕೇಂದ್ರಕ್ಕೆ ಏಕಾಏಕಿ ನೂರಾರು ರೈತರು ಮೆಣಸಿನ ಬೀಜ ಖರೀದಿಗೆ ಬಂದಿದ್ದು, ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿದೆ. ಬಳ್ಳಾರಿ ತಹಶಿಲ್ದಾರರ ಕಚೇರಿ ಆವರಣದಲ್ಲಿ ರೈತ ಸಂಪರ್ಕ ಕೇಂದ್ರವಿದ್ದು, ಮೆಣಸಿನಕಾಯಿ ಬೀಜ ಖರೀದಿಗೆ ಬಂದಿದ್ದ ರೈತರು, ಸಮರ್ಪಕವಾಗಿ ಬೀಜ ನೀಡುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿದ್ದು, ರೈತರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದಾರೆ.

error: Content is protected !!