ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಮತ್ತೆ ಮುಂದಾಗಿದ್ದಾರೆ. ಸರ್ಕಾರದ ವಿರುದ್ಧ ಇಂದು ಅನ್ನದಾತರು ಬಾರಕೋಲ ಚಳುವಳಿ ನಡೆಸಲಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದ ಬಾರಕೋಲ ಚಳುವಳಿ ನಡೆಯಲಿದ್ದು, ರಾಜ್ಯದ ನಾನಾ ಭಾಗದಿಂದ ರೈತರು ಆಗಮಿಸಲಿದ್ದಾರೆ.
ಕೈಯಲ್ಲಿ ಬಾರಕೋಲ ಹಿಡುದು, ಹಲಗಿ ಬಾರಿಸಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇಂದು ಬೆಳಗ್ಗೆ 10.30 ಕ್ಕೆ ನಗರದ ಚನ್ನಮ್ಮ ವೃತ್ತದಿಂದ ಸುವರ್ಣ ವಿಧಾನ ಸೌಧದ ವರೆಗೂ ಬಾರಕೋಲ ಚಳುವಳಿ ನಡೆಯಲಿದೆ.
ಬೆಳಗಾವಿಯಲ್ಲಿ 144 ಸೆಕ್ಷನ್ ಇರುವುದರಿಂದ ಪೊಲೀಸರು ಚನ್ನಮ್ಮ ವೃತ್ತದಲ್ಲಿಯೇ ರೈತರನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದೆ.