ಚಾಮರಾಜನಗರ: ಇವತ್ತು ಜಿಲ್ಲೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಸಿದ್ದತಾ ಕಾರ್ಯ ಪೂರ್ಣವಾಗಿದ್ದು, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನಲ್ಲಿರುವ ವಡ್ಡಗೆರೆ ಹತ್ತಿರ ಮೂರು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ.
ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜ್ ಹತ್ತಿರ ಮೂರು ಹೆಲಿಪ್ಯಾಡ್ ನಿರ್ಮಾಣ ಮಾಡಿದ್ದಾರೆ. ಬಿಳಿಗಿರಿರಂಗನ ಬೆಟ್ಟಕ್ಕೆ ಮುಂಜಾನೆ ೧೧.೪೦ ಕ್ಕೆ ರಾಮನಾಥ್ ಕೋವಿಂದ್ ಭೇಟಿ ನೀಡಲಿದ್ದಾರೆ. ಇದೇ ವೇಳೆ ಮೈಸೂರಿನಿಂದ ರಸ್ತೆ ಮಾರ್ಗ ಚಾಮರಾಜನಗರಕ್ಕೆ ಆಗಮಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಾಹ್ನ ೧.೨೫ಕ್ಕೆ ಯಡಬೆಟ್ಟ ಹೆಲಿಪ್ಯಾಡ್ ಬಳಿ ರಾಷ್ಟ್ರಪತಿಯನ್ನು ಸ್ವಾಗತ ಮಾಡಲಿದ್ದಾರೆ.
೧೬೨ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಸರ್ಕಾರಿ ಮೆಡಿಕಲ್ ಕಾಲೇಜ್ ಬೋಧನಾ ಆಸ್ಪತ್ರೆಯನ್ನು ಮಧ್ಯಾಹ್ನ ೩.೩೦ಕ್ಕೆ ರಾಮನಾಥ್ ಕೋವಿಂದ್ ಸರ್ಕಾರಿ ಮೆಡಿಕಲ್ ಕಾಲೇಜ್ ಬೋಧನಾ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಕೇವಲ ಐದು ನೂರು ಜನರಿಗೆ ಮಾತ್ರ ಅವಕಾಶ ನೀಡಿದ್ದಾರೆ. ಬಿಳಿಗಿರಿರಂಗನ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆದೇಶವನ್ನು ಹೊರಡಿಸಿದ್ದಾರೆ.