ಕೂಗು ನಿಮ್ಮದು ಧ್ವನಿ ನಮ್ಮದು

ದೆಹಲಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಇವತ್ತು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ಹೋಗುವ ಮೊದಲು ಮುಖ್ಯಮಂತ್ರಿ ಮನೆಗೆ ಕೋಟಾ ಶ್ರೀನಿವಾಸ ಪೂಜಾರಿ, ಅರವಿಂದ್ ಬೆಲ್ಲದ್, ಹರತಾಳು ಹಾಲಪ್ಪ ಮೊದಲಾದವರು ಆಗಮಿಸಿದರು. ಕೆಲ ಕಾಲ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಾಯಕರು ಆರ್‌ ಟಿನಗರ ನಿವಾಸದಿಂದ ತೆರಳಿದ್ದಾರೆ.


ಇತ್ತ ಮುಖ್ಯಮಂತ್ರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತಮ್ಮ ಆರ್ ಟಿನಗರ ನಿವಾಸದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಸಿಎಂ ಅವರು ಜಾಗತಿಕ ಬಂಡವಾಳ ಹೂಡಿಕೆದಾರ ರಾಷ್ಟ್ರಗಳ ರಾಯಭಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ. ಇವತ್ತು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಅವರು, ನಾಳೆ ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಸಾಧ್ಯವಾದ್ರೆ ದೆಹಲಿಯಲ್ಲಿ ಕೇಂದ್ರ ನಾಯಕರನ್ನ ಭೇಟಿ ಮಾಡಲಿದ್ದಾರೆ.

error: Content is protected !!