ಕೂಗು ನಿಮ್ಮದು ಧ್ವನಿ ನಮ್ಮದು

ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ, ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ನೀಡಲಿ: ಸುರ್ಜೇವಾಲ ಆಗ್ರಹ

ಉಡುಪಿ: ಬಿಜೆಪಿ ಶಾಸಕ ಪುತ್ರನ ಮನೆ, ಕಚೇರಿಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಸಿಎಂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿದೆ. ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 40 ಲಕ್ಷ ರೂ. ಪಡೆಯುವಾಗ ಬಿಜೆಪಿ ಶಾಸಕರ ಪುತ್ರ ಸಿಕ್ಕಿಬಿದ್ದಿದ್ದಾನೆ. 24 ಗಂಟೆಯೊಳಗೆ ಮನೆಯಲ್ಲಿ 6 ಕೋಟಿ ರೂಪಾಯಿ ಪತ್ತೆಯಾಗಿದೆ. ಮೈಸೂರು ಸ್ಯಾಂಡಲ್ ಸುವಾಸನೆಯನ್ನು ಭ್ರಷ್ಟ ಮಾಡಿಬಿಟ್ಟಿದ್ದಾರೆ. ಈ ಎಲ್ಲಾ ಭ್ರಷ್ಟಾಚಾರದ ಹಣ ಎಲ್ಲಿಗೆ ಹೋಗಿದೆ. ಕರ್ನಾಟಕದಲ್ಲಿ ಲೂಟಿ ಹೊಡೆದಿರುವ ಹಣಕ್ಕೆ ಯಾರು ಜವಾಬ್ದಾರಿ? ಲೂಟಿ ಹೊಡೆದ ಹಣದಲ್ಲಿ ಸಿಎಂ, ಸಚಿವರಿಗೆ ಎಷ್ಟು ಪಾಲು ಇದೆ? ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಲೆದಂಡ ಆಗಿಲ್ಲ ಯಾಕೆ? ಬಿಜೆಪಿ ಶಾಸಕ ವಿರೂಪಾಕ್ಷಪ್ಪ ತಲೆಮರೆಸಿಕೊಳ್ಳಲು ಬಿಟ್ಟಿದ್ಯಾಕೆ? ಈ ಭ್ರಷ್ಟಾಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಾತ್ರ ಏನು? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನವಾಗಿರುವು ಯಾಕೆ ಎಂದು ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಮಾತನಾಡುತ್ತಿಲ್ಲ ಯಾಕೆ? ಬಿಜೆಪಿ ಅಧ್ಯಕ್ಷ ನಡ್ದಾ, ಕೇಂದ್ರ ಸಚಿವ ಅಮಿತ್ ಶಾ ಅವರೇ ಎಲ್ಲಿದ್ದೀರಿ? ಇಡಿ, ಸಿಬಿಐ ಅಧಿಕಾರಿಗಳು ಯಾವಾಗ ಕರ್ನಾಟಕಕ್ಕೆ ಬರುತ್ತಾರಾ? ಶಾಸಕರು, ಸಚಿವರು, ಸಿಎಂ ನಿವಾಸ ಮೇಲೆ ಯಾವಾಗ ದಾಳಿ ಮಾಡ್ತೀರಿ? ಕರ್ನಾಟಕ ಜನರ ಪರವಾಗಿ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ ಎಂದು ಹೇಳಿದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಬೇಕು: ಸುರ್ಜೇವಾಲ ಆಗ್ರಹ ಇನ್ನು ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಬೇಕು ಎಂದು ಸುರ್ಜೇವಾಲ ಆಗ್ರಹಿಸಿದ್ದಾರೆ. ಬೊಮ್ಮಾಯಿ ಮೂಗಿನ ಕೆಳಗೆ ನಡೆದ ಭ್ರಷ್ಟಾಚಾರ ಬಯಲಾಗಿದೆ. ಒಳಚರಂಡಿ ಮತ್ತು ನೀರು ಸರಬರಾಜು ಬೋರ್ಡ್ ನಲ್ಲಿ ಎಷ್ಟು ಸಾವಿರ ಕೋಟಿ ಈವರೆಗೆ ಲೂಟಿ ಮಾಡಿದ್ದೀರಿ? ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿಶ್ವವಿಖ್ಯಾತಿಯನ್ನು ಪಡೆದಿದೆ. ಭ್ರಷ್ಟಾಚಾರದ ಹಣದಲ್ಲಿ ಯಾರಿಗೆಲ್ಲ ಪಾಲು ಇದೆ ಎಂಬುದನ್ನು ಹೇಳಲಿ. ರಾಜ್ಯದ ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ಈ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

2018ರಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮನೆಯ ಮೇಲೆ ಐಟಿ ದಾಳಿ 2018ರ ವಿಧಾನ ಸಭೆ ಚುನಾವಣೆ ವೇಳೆಯಲ್ಲಿಯೇ ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಮನೆಯ ಮೇಲೆ ಐಟಿ ದಾಳಿ ಆಗಿತ್ತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದ ಮನೆ ಸೇರಿದಂತೆ ಹಲವಾರು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈಗಲೂ ಸಹ ವಿಧಾನ ಸಭೆ ಚುನಾವಣೆ ಹತ್ತಿರ ಇರುವಾಗಲೇ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಎರಡು ಸಲ ಶಾಸಕರಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಐಟಿ ಹಾಗೂ ಲೋಕಾಯುಕ್ತ ದಾಳಿ ಬಿಸಿ ತಟ್ಟಿದೆ. ಈ ಸಲ ಮಾತ್ರ ಪುತ್ರ ‌ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದಿದ್ದಾರೆ. ಆಪ್ತ ವಲಯದಲ್ಲಿಯೇ ಶಾಸಕ ಮಾಡಾಳ್ ಟಾರ್ಗೆಟ್ ಆಗಿದ್ದಾರೆ.

error: Content is protected !!