ಕೂಗು ನಿಮ್ಮದು ಧ್ವನಿ ನಮ್ಮದು

ಕೇಂದ್ರ ಸರ್ಕಾರದ ಯೋಜನೆಗಳನ್ನು ಹಾಡಿ ಹೊಗಳಿದ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಉತ್ತಮ ಜನಪರ ಆಡಳಿತ ನೀಡುತ್ತಿದೆ. ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿದೆ. ದೇಶದಲ್ಲಿ ಶಾಂತಿ ನೆಲೆಸುವ ಕೆಲಸವನ್ನು ಮೋದಿ ಸರ್ಕಾರ ಮಾಡಿದೆ. ಜಿಎಸ್ಟಿ ಮೂಲಕ ಆದಾಯ ಸಂಗ್ರಹ ಮಾಡಲಾಗುತ್ತಿದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯಕ್ಕೆ ಮೋದಿ ಸರ್ಕಾರ ಸಾಕಷ್ಟು ಯೋಜನೆ ನೀಡಿದೆ. ನಮ್ಮ ಮೆಟ್ರೋ ಸೇರಿದಂತೆ ಹಲವು ರೈಲು ಯೋಜನೆಗಳಿಗೆ ಅನುದಾನ ನೀಡಿದೆ. ಬೆಂಗಳೂರಿನ ಸಬ್ಅರ್ಬನ್ ರೈಲು ಯೋಜನೆಗೆ ವಿಶೇಷ ಅನುದಾನ ನೀಡಲಾಗಿದೆ. ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಗೆ ಅನುದಾನ ನೀಡಲಾಗಿದೆ. ಸಾಗರಮಾಲಾ ಯೋಜನೆ, ಪ್ರವಾಸೋದ್ಯಮ ವೃದ್ಧಿಗೆ ಹಣ ಬಂದಿದೆ ಎಂದು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

error: Content is protected !!