ಕೂಗು ನಿಮ್ಮದು ಧ್ವನಿ ನಮ್ಮದು

ಸತತ ೮ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಬಸವರಾಜ್ ಹೊರಟ್ಟಿ

ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ನ ಬಸವರಾಜ ಗುರಿಕಾರ ಹಾಗೂ ಜೆಡಿಎಸ್‌ನ ಶ್ರೀಶೈಲ ಗಿಡದಿನ್ನಿ ಮುಖಭಂಗ ಅನುಭವಿಸಿದ್ದಾರೆ.

ಆದರೆ, ಹೆಚ್ಚಿನ ತಿರಸ್ಕಾರಗೊಂಡ ಮತಗಳಿಂದ ಹೊರಟ್ಟಿಯವರ ಲೀಡ್ ಪ್ರಮಾಣ ಕುಸಿತ ಕಂಡಿದೆ. ತಿರಸ್ಕಾರಗೊಂಡ ಬಹುತೇಕ ಮತಗಳು ಹೊರಟ್ಟಿಗೆ ಚಲಾವಣೆಗೊಂಡಿದ್ದವು ಎಂದು ತಿಳಿದುಬಂದಿದೆ. ಹೊರಟ್ಟಿ ವಿಜಯದ ಹಿನ್ನೆಲೆಯಲ್ಲಿ ಅಭಿಮಾನಿಗಳಿಂದ ಬೆಳಗಾವಿಯ ಮತ ಎಣಿಕೆ ಕೇಂದ್ರದ ಹೊರಗಡೆ ವಿಜಯೋತ್ಸವ ನಡೆದಿದೆ. ಬಸವರಾಜ ಹೊರಟ್ಟಿ ಅವರ ಭಾವಚಿತ್ರ ಹಿಡಿದು ಸಂಭ್ರಮಿಸಿದ್ದಾರೆ. 

error: Content is protected !!