ಬೆಳಗಾವಿ: 2021-22 ಕೃಷಿ ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಕೃಷಿ, ಮೀನುಗಾರಿಕೆ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ರೈತರಿಗೆ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಆಸಕ್ತ ಗುಂಪು ಪ್ರಶಸ್ತಿಗಾಗಿ ಆಸಕ್ತ ಗುಂಪುಗಳ ಪ್ರತಿನಿಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕು ಮಟ್ಟದಲ್ಲಿ ಪ್ರತಿ ತಾಲೂಕಿಗೆ 05 ಜನ ಹಾಗೂ ಜಿಲ್ಲಾ ಮಟ್ಟದಲ್ಲಿ 10 ಜನ ರೈತರಿಗೆ ಆತ್ಮ ಯೋಜನೆಯ ‘ಶ್ರೇಷ್ಠ ಕೃಷಿಕ’ ಪ್ರಶಸ್ತಿಗಾಗಿ ಮತ್ತು ಜಿಲ್ಲಾ ಮಟ್ಟದಲ್ಲಿ ಒಟ್ಟು 05 ‘ ಶ್ರೇಷ್ಠ ಆಸಕ್ತ ರೈತರ ಗುಂಪುಗಳ’ ಪ್ರಶಸ್ತಿಗಾಗಿ ಅರ್ಜಿಗಳನ್ನು ಕರೆಯಲಾಗಿದ್ದು, ಸಂಬಂಧಪಟ್ಟ ತಾಲೂಕಾ ಸಹಾಯಕ ನಿರ್ದೇಶಕರ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ಅಗಸ್ಟ 15 ಸಂಜೆ 5 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಆತ್ಮ ಯೋಜನೆ ಹಾಗೂ ಉಪ ಕೃಷಿ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.
ತಡವಾಗಿ ಸಲ್ಲಿಸಿದ ಅಥವಾ ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಈಗಾಗಲೇ ಸರ್ಕಾರದಿಂದಲೇ ಅಥವಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಮೇಲೆ ನೀಡಿರುವ ವಿಷಯಗಳಲ್ಲಿ ಸಮನಾದ ಪ್ರಶಸ್ತಿಗಳನ್ನು ಪಡೆದ ರೈತರು ಹಾಗೂ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಆದರೆ, ತಾಲೂಕು ಮಟ್ಟದಲ್ಲಿ ಪ್ರಶಸ್ತಿ ಪಡೆದ ರೈತರು ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಆತ್ಮ ಯೋಜನೆ ಹಾಗೂ ಉಪ ಕೃಷಿ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.