ಕೂಗು ನಿಮ್ಮದು ಧ್ವನಿ ನಮ್ಮದು

ಡಿವೈಡರ್ ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ತುಮಕೂರು: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತುಮಕೂರು ನಗರದ ಹನುಮಂತಪುರ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ. ಮೃತ ಬೈಕ್ ಸವಾರರಿಬ್ಬರೂ ಹಾವೇರಿ ಜಿಲ್ಲೆಯ ಶಂಕರಿಕೊಪ್ಪ ಗ್ರಾಮದ ಯುವಕರಾಗಿದ್ದು, ಮೃತರನ್ನು, ಸಚಿನ್ (21) ಮಲ್ಲಿಕಾರ್ಜುನ್ (24) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದಾಗ ಹನುಮಂತಪುರದ ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದಾರೆ.

ತಡರಾತ್ರಿ 1.45 ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!