ಬಹಿರಂಗ ಪ್ರಚಾರ ಅಂತ್ಯಗೊಂಡ ಬೆನ್ನಲ್ಲೇ ಸದ್ದು ಮಾಡುತ್ತಿರುವ ಕುರುಡು ಕಾಂಚಾಣ. ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಮತದಾರರಿಗೆ ಹಣದ ಆಮಿಷ ಹೊರಡುತ್ತಿರುವ ಇಬ್ಬರು ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ. ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ್ ಹಣ ಹಂಚುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿ ದಾಳಿ.
ಕಲಬುರಗಿ ನಗರದ ಉತ್ತರ ಮತಕ್ಷೇತ್ರದ ಸಂಗಮೇಶ್ವರ ಕಾಲೋನಿ ಸೇರಿದಂತೆ ಇತರೆಡೆ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ದುಡ್ಡು ಹಂಚುತ್ತಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ಆರೋಪ. ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ಆಗ್ರಹ.