ಕೂಗು ನಿಮ್ಮದು ಧ್ವನಿ ನಮ್ಮದು

ವರ್ತೂರು ಪ್ರಕಾಶ್, ಮಂಜುನಾಥಗೌಡ ಬಿಜೆಪಿಗೆ ಸೇರ್ಪಡೆ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ಮಾಜಿ ಶಾಸಕ ಮಂಜುನಾಥಗೌಡ ಅವರು ಅಪಾರ ಬೆಂಬಲಿಗರೊಂದಿಗೆ ಮಾಲೂರಿನ ಚಿಕ್ಕ ತಿರುಪತಿ ದೇವಾಲಯದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕೋಲಾರ ಸಂಸದ ಎಸ್.ಮುನಿಸ್ವಾಮಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಪೂಜೆ ನಂತರ ಬಿಜೆಪಿಯ ಮುಖಂಡರು ಬೆಂಗಳೂರಿಗೆ ತೆರಳಿದರು. 

error: Content is protected !!