ಬೆಂಗಳೂರು: ಹೊಸ ಸರ್ಕಾರ ರಚನೆ ಬಳಿಕ ಬಜೆಟ್ ಮಂಡನೆಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜುಲೈ 7ರಂದು ಹೊಸ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಕರ್ನಾಟಕದಲ್ಲಿ ಕರೆಂಟ್ ಕದನ ಶುರುವಾಗಿದೆ. ಪ್ರತಿ ಮನೆಗು 200 ಯುನಿಟ್ವರೆಗು ಉಚಿತ ವಿದ್ಯುತ್ನ ಚರ್ಚೆ ಒಂದಡೆಯಾದರೇ ವಿದ್ಯುತ್ ದರ ಏರಿಕೆ ಚರ್ಚೆ ಮತ್ತೊಂದಡೆ. ವಿದ್ಯುತ್ ದರ ಏರಿಕೆಯಿಂದ ರಾಜ್ಯದ ಜನತೆ ಹೈರಾಣಾಗಿದ್ದು, ದುಪ್ಪಟ್ಟು ಬಿಲ್ ಬಂದಿರುವುದನ್ನು ಕಂಡು ಶಾಕ್ ಆಗಿದ್ದಾರೆ. ಈ ವಿಚಾರವಾಗಿ ರಾಜಕೀಯ ಕೆಸೆರೆಚಾಟ ಶುರುವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಿಪಕ್ಷಗಳು ಹರಿಹಾಯ್ದಿವೆ. ಇನ್ನು ರಾಜ್ಯದಲ್ಲಿ ಮಳೆಯಾಗದ ಜಲಾಶಯಗಳು ಬರಿದಾಗುತ್ತಿದ್ದು, ಮಳೆಗಾಗಿ ವಿಶೇಷ ಪೂಜೆ ಮತ್ತು ಹರಕೆಗಳನ್ನು ಜನರು ಸಲ್ಲಿಸುತ್ತಿದ್ದಾರೆ. ಇನ್ನು ಅಪಘಾತ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಮತ್ತು ಅಪರಾಧ ಪ್ರಕರಣಗಳೂ ಕೂಡ ಜನರನ್ನು ಬೆಚ್ಚಿ ಬೀಳಿಸಿವೆ