ಕೂಗು ನಿಮ್ಮದು ಧ್ವನಿ ನಮ್ಮದು

ಬಿ ಎಸ್ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಬಿಜೆಪಿ ಪಾರ್ಲಿಮೆಂಟರಿ ಬೋರ್ಡ್; ಯಾರೂ ಹಾದಿ ಬೀದಿಯಲ್ಲಿ ಮಾತಾಡಬಾರದು: ಸಿ ಟಿ ರವಿ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಸಂಸದೀಯ ಮಂಡಳಿ ನಿರ್ಣಯ ಕೈಗೊಳ್ಳುತ್ತದೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ ಪಾರ್ಲಿಮೆಂಟರಿ ಬೋರ್ಡ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಯಾರೂ ಕೂಡ ಹಾದಿಬೀದಿಯಲ್ಲಿ ಮಾತನಾಡಬಾರದು. ಬದಲಾವಣೆ ಬಗ್ಗೆ ನಾನು ಹೇಳಿದರೂ ಅದು ಆಗುವುದಿಲ್ಲ. ಪಾರ್ಲಿಮೆಂಟರಿ ಬೋರ್ಡ್ ನಿರ್ಣಯವೇ ಅಂತಿಮ ಆಗುತ್ತೆ. ನಾಯಕತ್ವ ಬದಲಾವಣೆ ಈಗ ಚರ್ಚೆಯ ವಿಷಯವೇ ಅಲ್ಲ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ನಾಳೆ ರಾಜ್ಯ ಬಿಜೆಪಿ ಘಟಕದ ಕೋರ್ ಕಮಿಟಿ ಸಭೆ ಇದೆ. ಸಭೆಯಲ್ಲಿ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಯಲಿದೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಸಂಪುಟ ಪುನಾರಚನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

error: Content is protected !!