ಬೆಂಗಳೂರು: ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ATMಗಳನ್ನು ತುಂಬಿಸಿಕೊಳ್ಳುವುದಕ್ಕೆ, ಹೊರತು ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ ಎಂದು BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಸಿಟಿ ರವಿ ತಿರುಗೇಟು ನೀಡಿದ್ದಾರೆ. BJP ಕಛೇರಿಯಲ್ಲಿ ಪ್ರೆಸ್ ಮೀಟ್ ನಡೆಸಿ ಮಾತನಾಡಿದ ಸಿ.ಟಿ.ರವಿ ಅವರು ಕಾಂಗ್ರೆಸ್‌ನವರು ಬೇಕಾದ್ರೆ ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೇಗೆಯಲಿ, ಇಲ್ಲಾ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಅಂತಾ
ಈಗ ಇಂದಿರಾ ಕ್ಯಾಂಟೀನ್ನನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಅಂತಾ ಮಾಡಬೇಕು ಎಂದು ಪ್ರಸ್ತಾಪಿಸಿದ್ದೇನೆ ಎಂದು ಹೇಳಿದ್ರು.
ನೆಹರು, ಇಂದಿರಾ ಗಾಂಧಿಯವರ ಒಳ್ಳೆಯ ಕೊಡುಗೆಗಳನ್ನು ನೆನೆಯುತ್ತೇವೆ. ಆದ್ರೆ ಅವರು ಮಾಡಿದ್ದೆಲ್ಲವನ್ನೂ ಒಪ್ಪಿಕೊಳುವುದ್ದಕ್ಕೆ ನಾವೇನು ಅವರ ಗುಲಾಮರಲ್ಲ ಎಂದು ಕಾಂಗ್ರೆಸ್ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ನಮ್ಮ ರಾಜಕೀಯ ವಿರೋಧಿಗಳು ಹಳೆಯ ಗ್ರಾಮಾಫೋನ್ ಪ್ಲೇಟ್ ತಿರುಗಿಸುತ್ತಲೇ ಇರುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಕೂಡ ಒಬ್ರು. ಸಿದ್ದರಾಮಯ್ಯನವರು ಇನ್ನೂ ಅಪ್ ಡೇಟ್ ಆಗಬೇಕು. ನಾವು ಅಂಬೇಡ್ಕರ್ ವಿರೋಧಿಗಳಲ್ಲ. ಅಂಬೇಡ್ಕರ್ ಅವರನ್ನು ೨ ಬಾರಿ ಸೋಲಿಸಿದ್ದು ಕಾಂಗ್ರೆಸ್. ನಿಮ್ಮ ಸಾಫ್ಟ್ ವೇರ್ ಅಪ್ಡೇಟ್ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕೆಂಡ ಕಾರಿದ್ರು.
೬೭೧ ಒಬಿಸಿ ಸಮುದಾಯಗಳು ನ್ಯಾಯ ಪಡೆಯಲು ಸಾಧ್ಯವಾಗಲಿದೆ. ಮೀಸಲಾತಿ, ಸಾಮಾಜಿಕ ನ್ಯಾಯ BJPಯ ಬದ್ಧತೆಯಾಗಿದ್ದು, ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರವು ನಡೆದುಕೊಳ್ಳುತ್ತಿದೆ. ಸಂಸತ್ತನ್ನು ಖಾನ್ ಮಾರ್ಕೆಟ್ ಆಗಿ ಪರಿವರ್ತಿಸಿದ್ದವರು ಕಾಂಗ್ರೆಸ್‍ನವರು ಎಂದು ಸಿ.ಟಿ. ರವಿ ದೂರಿದ್ರು.