ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ದುರ್ಮರಣಕ್ಕಿಡಾಗಿರೋ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಾರು ಮತ್ತು ಕ್ರೂಜರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಹುಬ್ಬಳ್ಳಿ ರಸ್ತೆಯ ಕೊಂಡಿಕೊಪ್ಪ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಣ್ಣಿಗೇರಿ ಪಟ್ಟಣದ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ.
ಸಣ್ಣಗಂಗಣ್ಣ, ನಾಗಮ್ಮ, ಹನುಮಂತು ಮತ್ತು ಈರಣ್ಣಾ ಮೃತ ದುರ್ದೈವಿಗಳಾಗಿದ್ದು, ಸಣ್ಣೀರಣ್ಣ ಮತ್ತು ಲಕ್ಷ್ಮೀ ಗಾಯಗೊಂಡವರು. ಕ್ರೂಜರ್ ನ ಚಾಲಕ ಮಲ್ಲಪ್ಪ ಗಿಡ್ಡನ್ನವರ ಎಂಬಾತನಿಗೆ ತೀವ್ರ ಗಾಯಗಳಾಗಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಮೃತರು ರಾಯಚೂರು ಜಿಲ್ಲೆಯ ಮಾನ್ವಿಯ ವಿಠ್ಠಲ ನಗರದ ನಿವಾಸಿಗಳು ಎನ್ನಲಾಗಿದೆ. ಮಾನ್ವಿಯಿಂದ ಕಾರವಾರದ ಹಲಗಾಗೆ ಪಾರ್ಶ್ವವಾಯು ಚಿಕಿತ್ಸೆಗೆ ಹೊರಟಿದ್ದವರು ವಿಧಿಯ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಣ್ಣಿಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.