ಕನ್ನಡ ಕಿರುತೆರೆಯ ಸ್ಟಾರ್ ನಟ ಚಂದನ್ ಕುಮಾರ್‌ಗೆ ತೆಲುಗು ತಂತ್ರಜ್ಞರು ಕಪಾಳಮೋಕ್ಷ ಮಾಡಿರುವ ವೀಡಿಯೋ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ಚಂದನ್ ಕುಮಾರ್ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೇ ಹೈದರಾಬಾದ್‍ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ನಡೆಯುತ್ತಿತ್ತು. ಈ ಧಾರಾವಾಹಿಯಲ್ಲಿ ಮುಖ್ಯಪಾತ್ರದಲ್ಲಿ ಚಂದನ್ ಕುಮಾರ್ ಅಭಿನಯಿಸುತ್ತಿದ್ದಾರೆ. ಈ ಧಾರವಾಹಿ ಶೂಟಿಂಗ್ ಸೆಟ್‍ನಲ್ಲಿ ಅಲ್ಲಿನ ತಂತ್ರಜ್ಞರು ನಟ ಚಂದನ್ ಮೇಲೆ ಹಲ್ಲೆ ನಡೆಸಿದ್ದಾರೆ.
ಶೂಟಿಂಗ್ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದು, ಕ್ಯಾಮೆರಾ ಅಸಿಸ್ಟೆಂಟ್‍ಗೆ ಮೊದಲು ಚಂದನ್ ಅವರೇ ಹಲ್ಲೆ ಮಾಡಿದ್ದಾರೆ ಎಂಬ ಆರೋಪಿಸಲಾಗಿದ್ದು, ಬಳಿಕ ತೆಲುಗು ತಂತ್ರಜ್ಞರು ಒಟ್ಟಾಗಿ ಚಂದನ್‍ಗೆ ನಿಂದಿಸಿದ್ದಾರೆ. ಸೀರಿಯಲ್ ತಂತ್ರಜ್ಞರ ಜೊತೆ ಮಾತಿಗೆ ಮಾತು ಬೆಳೆದು ಕನ್ನಡ ನಟ ಚಂದನ್‍ಗೆ ಅವರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಹಲ್ಲೆ ನಡೆದಿದ್ದು, ಇದೀಗ ಈ ವೀಡಿಯೋ ವೈರಲ್ ಆಗಿದೆ.
ಚಂದನ್ ಹಿಂದೆ ಲಕ್ಷ್ಮೀ ಬಾರಮ್ಮ, ‘ರಾಧಾ ಕಲ್ಯಾಣ’, ‘ಸರ್ವ ಮಂಗಳ ಮಾಂಗಲ್ಯೇ’ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಲವ್ ಯು ಅಲಿಯಾ, ಅರ್ಜುನ್ ಸರ್ಜಾ ನಿರ್ದೇಶನದ “ಪ್ರೇಮ ಬರಹ” ಸೇರಿ ಕನ್ನಡದ ಕೆಲವು ಸಿನಿಮಾಗಳಲ್ಲೂ ಚಂದನ್ ಬಣ್ಣಹಚ್ಚಿದ್ದಾರೆ. ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ’ ಮರಳಿ ಮನಸಾಗಿದೆ, ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ