ಕೂಗು ನಿಮ್ಮದು ಧ್ವನಿ ನಮ್ಮದು

ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ ಬೆಂಬಲಿಗರಿಂದ ಹಣ ಹಂಚಿಕೆ ಆರೋಪ; ಅಧಿಕಾರಿಗಳಿಂದ ದಾಳಿ,1.50 ಕೋಟಿ ರೂ. ಜಪ್ತಿ

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಕೆಲವೆ ದಿನಗಳು ಬಾಕಿಯಿದ್ದು, ಮತದಾರರಿಗೆ ಆಮಿಷಗಳನ್ನೊಡ್ಡಿ ಹೇಗಾದರೂ ಮಾಡಿ ಗೆಲ್ಲಬೇಕೆಂಬ ಉದ್ದೇಶದಿಂದ ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿವೆ. ಇನ್ನೊಂದೆಡೆ ಇಂತಹ ಅಕ್ರಮಗಳನ್ನ ತಡೆಯಲು ರಾಜ್ಯಾದ್ಯಂತ ಚೆಕ್ಪೋಸ್ಟ್ಗಳನ್ನ ನಿರ್ಮಿಸಲಾಗಿದೆ. ಅದರಂತೆ ಇದೀಗ ಜಿಲ್ಲೆಯ ರಾಮದುರ್ಗದಲ್ಲಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ1.50 ಕೋಟಿ ಹಣವನ್ನ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಹೌದು ನಿನ್ನೆ ತಾಲೂಕಿನ ತುರನೂರು ಬಳಿ ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ ಬೆಂಬಲಿಗರಿಂದ ಹಣ ಹಂಚಿಕೆ ಆರೋಪ ಕೇಳಿಬಂದಿದ್ದು, ಹಣ ಹಂಚಿಕೆ ಮಾಡುತ್ತಿದ್ದ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿತ್ತು. ಇದನ್ನ ನೋಡಿದ ಬಳಿಕ ಅಲರ್ಟ್ ಆಗಿದ್ದ ರಾಮದುರ್ಗ ಠಾಣೆ ಪೊಲೀಸರು, ಖಚಿತ ಮಾಹಿತಿ ಮೇರೆಗೆ ತಡರಾತ್ರಿ ದಾಳಿ ನಡೆಸಿ, ಕಾರಿನಲ್ಲಿ ಸಾಗಿಸುತ್ತಿದ್ದ ಅಕ್ರಮ ಹಣವನ್ನ ವಶಕ್ಕೆ ಪಡೆದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಣವನ್ನ ಹಸ್ತಾಂತರ ಮಾಡಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

error: Content is protected !!