ಶಿಕ್ಷಣ ಮತ್ತು ಆರೋಗ್ಯಕ್ಕೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದುಡ್ಡೇ ದೊಡ್ಡಪ್ಪ ಬದಲಾಗಿ, ದುಡಿಮೆಯೇ ದೊಡ್ಡಪ್ಪ ಆಗಿದೆ.
ನನ್ನ ಸರ್ಕಾರದ ಆಡಳಿತಾತ್ಮಕ ನಿರ್ಧಾರದಿಂದ ರಾಜ್ಯ ಸದೃಢವಾಗಿದೆ. ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗಿದೆ. ರಾಜ್ಯಾದ್ಯಂತ 463 ನಮ್ಮ ಕ್ಲಿನಿಕ್ಸ್ ಪ್ರಾರಂಭ ಮಾಡಿದ್ದೇವೆ. ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತರಿಗೆ 10 ಸಾವಿರ ರೂ. ಕೊಡ್ತಿದ್ದೇವೆ. ಮಸಣ ಕಾಯುವವರಿಗೆ ಖಾಯಂ ಹುದ್ದೆ ನೀಡಲು ಅಗತ್ಯ ಕ್ರಮ ಎಂದರು.