ಬೆಂಗಳೂರು: ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿಗೆ ಆಗಮಿಸಲಿದ್ದಾರೆ. ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸೋಮಣ್ಣ ಅವರು ನಂಜನಗೂಡು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು ಸಚಿವ ವಿ.ಸೋಮಣ್ಣಗೆ ಸಿಎಂ ಬೊಮ್ಮಾಯಿ ಸಾಥ್ ನೀಡಲಿದ್ದಾರೆ.
ಸೋಮಣ್ಣ ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದ್ದು ನಂಜನಗೂಡು ಪಟ್ಟಣದಲ್ಲಿ ಬಿಜೆಪಿಯಿಂದ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.