ಕೂಗು ನಿಮ್ಮದು ಧ್ವನಿ ನಮ್ಮದು

ಗ್ಯಾರಂಟಿ ಯೋಜನೆಗೆಗಳ ಜಾರಿಗೆಗೆ ಸಿದ್ಧತೆ ನಡೆಸಿದ ಸಿಎಂ, ಅಧಿಕಾರಿಗಳ ಜತೆ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸಿದ್ದರಾಮಯ್ಯ 5 ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಆಹಾರ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಇಂದಿನ ಸಭೆಯಲ್ಲಿ ಗ್ಯಾರಂಟಿಗಳ ಬ್ಲೂಪ್ರಿಂಟ್ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ.

error: Content is protected !!